ಕಾರುಗಳ ಸರಣಿ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು ತುಮಕೂರಿನಲ್ಲಿ ಘಟನೆ.

ತುಮಕೂರು – ಮೂರು ಕಾರುಗಳ ಮಧ್ಯೆ ಸರಣಿ ಅಪಘಾತ ನಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ನಗರದ ಹೊರವಲಯದ ನಾಗವಲ್ಲಿ ಬಳಿಯ ಬಾಣವರ ಗೇಟ್ನಲ್ಲಿ ನಡೆದಿದೆ.

ಚಿತ್ರದುರ್ಗದಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಹಾಗೂ ಕುಣಿಗಲ್ ಕಡೆಯಿಂದ ತುಮಕೂರು ಕಡೆ ಬರುತ್ತಿದ್ದ ಟೊಯೋಟಾ ಕ್ವಾಲಿಸ್ ಹಾಗೂ ಮತ್ತೊಂದು ಮಾರುತಿ ಬಲೇನೋ ಕಾರುಗಳ ಮಧ್ಯೆ ಸರಣಿ ಅಪಘಾತ ನಡೆದಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು 9ಕ್ಕೂ ಹೆಚ್ಚು ಮಂದಿ ಗಾಯಗೊಂಡು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ನು ಘಟನೆಯಲ್ಲಿ ತುಮಕೂರು ಸೆನ್ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ರಾಮಕೃಷ್ಣಪ್ಪ ರವರು ಸಹ ಗಾಯಗೊಂಡಿದ್ದು. ಅವರು ಯಾವುದೇ ಪ್ರಾಣಪಾಯ ಇಲ್ಲದೆ ಬಚಾವಾಗಿದ್ದು ಆರೋಗ್ಯವಾಗಿದ್ದಾರೆ ಎಂದು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ ಕೆ ವಿ ಸ್ಪಷ್ಟಪಡಿಸಿದ್ದಾರೆ.
ತುಮಕೂರಿಂದ ಕ್ವಾಲಿಸ್ ಕಾರು ವೇಗವಾಗಿ ಬಂದಿದ್ದು ರಸ್ತೆಯಲ್ಲಿ ಓವರ್ ಟೇಕ್ ಅಪ್ ಮಾಡಲು ಬಂದಾಗ ಕುಣಿಗಲ್ ಕಡೆಯಿಂದ ಬರುತ್ತಿದ್ದ ಎರಡು ಕಾರುಗಳಿಗೆ ಏಕಾಏಕಿ ಎದುರಾಗಿ ಘಟನೆ ನಡೆದಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಹೆಬ್ಬೂರು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನವೀನ್ ಕುಮಾರ್ ಸೇರಿದಂತೆ ಹಲವರು ಭೇಟಿ ನೀಡಿ ಗಾಯಾಳುಗಳನ್ನ ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾಗಿದ್ದಾರೆ.
ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.
