ಎಸ್ ಎಸ್ ಎಲ್ ಸಿ ಪರೀಕ್ಷೆ ಸಿದ್ಧತೆ, ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿದ ಜಿಲ್ಲಾ ಪಂಚಾಯತ್ ಸಿಇಒ- ಅಶ್ವಿಜಾ ಬಿ. ವಿ.

ಎಸ್ ಎಸ್ ಎಲ್ ಸಿ ಪರೀಕ್ಷೆ ಸಿದ್ಧತೆ, ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿದ ಜಿಲ್ಲಾ ಪಂಚಾಯತ್ ಸಿಇಒ- ಅಶ್ವಿಜಾ ಬಿ. ವಿ.

 

 

ತುಮಕೂರು – ಸರ್ಕಾರದ ಮಾರ್ಗಸೂಚಿ ಅನ್ವಯ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಸುಧಾರಿಸಲು ಸರ್ಕಾರ ಈಗಾಗಲೇ ಹಲವು ಕಟ್ಟು ನಿಟ್ಟಿನ ಕಾರ್ಯಕ್ರಮಗಳನ್ನ ಹಮ್ಮಿಕೊಂಡಿದ್ದು ಈ ಬಾರಿಯ ಫಲಿತಾಂಶ ಸುಧಾರಿಸದೆ ಹೋದರೆ ನೇರ ಹೊಣೆಗಾರರನ್ನಾಗಿ ಶಾಲೆಯ ಪ್ರಾಂಶುಪಾಲರು ಹಾಗೂ ಬಿ ಇ ಓ ಗಳನ್ನು ಹೊಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವರು ಒಳಗೊಂಡಂತೆ ಹಲವು ಅಧಿಕಾರಿಗಳು ಎಚ್ಚರಿಕೆ ನೀಡಿದ್ದು.

 

 

 

 

ಇದರ ನಡುವೆ ವಿದ್ಯಾರ್ಥಿಗಳು ಸಹ ಪರೀಕ್ಷೆ ಸಮೀಪವಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತಮ ಅಂಕ ಗಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಹ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಸಾಕಷ್ಟು ತಯಾರಿ ನಡೆಸುತ್ತಿದ್ದಾರೆ.

 

 

 

 

ಇದರ ನಡುವೆ ತುಮಕೂರು ಜಿಲ್ಲಾ ಪಂಚಾಯಿತಿ ಸಿಇಒ ಅಶ್ವಿಜ ಬಿ.ವಿ ರವರು ಸಹ ತುಮಕೂರಿನ ಶಿರಾ ಗೇಟ್ ಬಳಿಯ ಹೌಸಿಂಗ್ ಬೋರ್ಡ್, 80 ಫೀಟ್ ರೋಡ್, ಬಂಡೆಪಾಳ್ಯದ ಹಲವು ವಿದ್ಯಾರ್ಥಿಗಳ ಮನೆಗೆ ಖುದ್ದು ಭೇಟಿ ನೀಡಿದ ಸಿಇಓ ರವರು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ವಿದ್ಯಾರ್ಥಿಗಳಿಗೆ ಉತ್ತಮ ಅಂಕ ಗಳಿಸಿ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು.

 

 

 

ಇನ್ನು ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ವಿದ್ಯಾರ್ಥಿಗಳ ಜೀವನ ರೂಪಿಸಿಕೊಳ್ಳಲು ಮೊದಲ ಹಂತವಾಗಿದ್ದು ವಿದ್ಯಾರ್ಥಿಗಳು ಹೆಚ್ಚು ಅಂಕ ಪಡೆದು ತಮ್ಮ ಸಾಧನೆಯನ್ನು ಜಗತ್ತಿಗೆ ತೋರಿಸುವುದರೊಂದಿಗೆ ತಮ್ಮ ಶಿಕ್ಷಕರು ಹಾಗೂ ಪೋಷಕರಿಗೆ ತಮ್ಮ ಪರೀಕ್ಷೆಯ ಉತ್ತಮ ಫಲಿತಾಂಶವೇ ಉಡುಗೊರೆಯಾಗಬೇಕು ಎಂದರು.

 

 

 

ಇನ್ನು ಹಲವು ವಿದ್ಯಾರ್ಥಿಗಳು ಸಹ ತಾವು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ತಮ್ಮ ಪರೀಕ್ಷೆಯ ಪೂರ್ವಭಾವಿ ತಯಾರಿ ಹೇಗೆ ನಡೆಯುತ್ತಿದೆ ಎಂಬುದರ ಬಗ್ಗೆ ಸಿಇಒ ಜೊತೆ ಮಾಹಿತಿ ಹಂಚಿಕೊಂಡರು.

 

 

 

ಇದೇ ಸಂದರ್ಭದಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ವಿದ್ಯಾರ್ಥಿಗಳು ಪರೀಕ್ಷೆ ಸಂದರ್ಭದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕೂಡಲೇ ಕ್ರಮ ಕೈಗೊಂಡು ವಿದ್ಯಾರ್ಥಿಗಳ ಸಮಸ್ಯೆಗಳನ್ನ ಪರಿಹರಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

 

 

 

ಇದೇ ಸಂದರ್ಭದಲ್ಲಿ ಡಿ. ಡಿ.ಪಿ. ಐ ರಘು ಚಂದ್ರ, ಬಿ.ಇ.ಓ ಹನುಮಂತರಾಯಪ್ಪ, ಶಿಕ್ಷಣ ಸಂಯೋಜಕರಾದ ಮೂಡಲಪ್ಪ, ಎಂಎಸ್ ಪಾಷಾ ಸೇರಿದಂತೆ ಶಿಕ್ಷಕರು ಹಾಜರಿದ್ದರು.

Leave a Reply

Your email address will not be published. Required fields are marked *