ಫಿಲ್ಮ್ ಸ್ಟೈಲ್ ನಲ್ಲಿ ಚೇಸ್ ಮಾಡಿ ಹಲ್ಲೆ ಮಾಡಿದ ಯುವಕರ ಗುಂಪು.

ತುಮಕೂರು – ತುಮಕೂರಿನಲ್ಲಿ ಅಪರಾಧ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು ಅದಕ್ಕೆ ಪುಷ್ಠಿ ನೀಡುವಂತೆ ತುಮಕೂರಿನಲ್ಲಿ ಮತ್ತೊಂದು ಹಲ್ಲೆ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ.
ತಡ ರಾತ್ರಿ 3 ಗಂಟೆ ಸಮಯದಲ್ಲಿ ವ್ಯಕ್ತಿಯೊಬ್ಬನ ಮೇಲೆ ಸುಮಾರು ಹತ್ತಕ್ಕೂ ಹೆಚ್ಚು ಮಂದಿ ಫಿಲ್ಮಿ ಸ್ಟೈಲ್ ನಲ್ಲಿ ಕಾರು ಹಾಗೂ ಬೈಕ್ನಲ್ಲಿ ಚೇಸ್ ಮಾಡಿ ಕಾರು ಅಡ್ಡಗಟ್ಟಿ ಮನಸೋ ಇಚ್ಚೆ ಹಲ್ಲೆ ಮಾಡಿದ್ದಾರೆ.
ತುಮಕೂರಿನ ಹೃದಯ ಭಾಗವಾದ ಕುಣಿಗಲ್ ರಸ್ತೆಯ ಪಿಡಬ್ಲ್ಯೂಡಿ ಕಚೇರಿ ಮುಂಭಾಗದಲ್ಲೇ ಘಟನೆ ನಡೆದಿದ್ದು,ಹಲ್ಲೆಗೊಳಗಾದ ಯುವಕ ಯೂನಸ್ ನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ದೃಶ್ಯಾವಳಿ ವೈರಲ್ ಆಗುತ್ತಿದ್ದು , ನಡುರಸ್ತೆಯಲ್ಲಿ ಅಮಾನುಷವಾಗಿ ಹಲ್ಲೆ ನಡೆಸಿರುವುದು ಎದೆ ಝಲ್ ಎನಿಸುವಂತಿದೆ.
ಕಾರು ಹಾಗೂ ಬೈಕ್ ನಲ್ಲಿ ಕಿಲೋಮೀಟರ್ ತನಕ ಚೇಸ್ ಮಾಡಿಕೊಂಡು ಬಂದು ಹಲ್ಲೆ ಮಾಡಿದ್ದಾರೆ ಎಂದು ಗಾಯಳು ಯುನಸ್ ತಿಳಿಸಿದ್ದಾರೆ.
ಪ್ರಕರಣ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ತಿಲಕ್ ಪಾರ್ಕ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
