ತುಮಕೂರು ನಿರ್ಮಿತಿ ಕೇಂದ್ರದ ರಾಜಶೇಖರ್ ಮನೆ ಮೇಲೆ ಲೋಕಾಯುಕ್ತ ದಾಳಿ.

ತುಮಕೂರು _ಬೆಳಂಬಳಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು.
ರಾಜ್ಯದ ಏಳಕ್ಕೂ ಹೆಚ್ಚು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಲಾಗಿದ್ದು ಒಟ್ಟಾರೆ ಭ್ರಷ್ಟ ಅಧಿಕಾರಿಗಳ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ತುಮಕೂರು, ಬೆಂಗಳೂರು ಮಂಗಳೂರು ,ಯಾದಗಿರಿ ಸೇರಿದಂತೆ ರಾಜ್ಯದ ಹಲವಡೆ ಲೋಕಾಯುಕ್ತ ದಾಳಿ ನಡೆಸಲಾಗಿದೆ
. ತುಮಕೂರಿನ ನಿರ್ಮಿತಿ ಕೇಂದ್ರದ ಎಂ .ಡಿ ರಾಜಶೇಖರ್ ಮನೆ ಮೇಲು ಸಹ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಅಧಿಕಾರಿಯ ಮನೆಯಲ್ಲಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಹಲವು ವರ್ಷಗಳಿಂದ ತುಮಕೂರಿನ ನಿರ್ಮಿತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಜಶೇಖರ್. ಇದೆ ವೇಳೆ ಲೋಕಾಯುಕ್ತ ಅಧಿಕಾರಿಗಳು ರಾಜಶೇಖರ್ ಸಹೋದರನ ಮನೆ ಮೇಲು ಸಹ ಧಾಳಿ ಮಾಡಿದ್ದು ತನಿಖೆ ಕೈಗೊಂಡಿದ್ದಾರೆ.
