ಶಾಲಾ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ಪ್ರಕರಣ ಎಫ್ ಐ ಆರ್ ದಾಖಲು.

ತುಮಕೂರು – ಕಳೆದ ಎರಡು ದಿನಗಳ ಹಿಂದೆ ಮಧುಗಿರಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕಿ ನೀಡಿದ ದೂರಿನ ಅನ್ವಯ ಎಫ್ ಐ ಆರ್ ದಾಖಲಾಗಿದೆ.
ಶಾಲೆಗೆ ಅಕ್ರಮವಾಗಿ ಪ್ರವೇಶ ಮಾಡಿ ಶಾಲಾ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಸಿದಂತೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಇನ್ನೂ ಘಟನೆಯ ಸಂಭಂದಿಸಿದಂತೆ ಸಾಕಷ್ಟು ಮಾಧ್ಯಮಗಳು ಸಹ ಸುದ್ದಿ ಪ್ರಸಾರ ಮಾಡಿದವು. ಇನ್ನು ಘಟನೆಗೆ ಜಿಲ್ಲೆಯಾದ್ಯಂತ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದ ಪ್ರಕರಣಕ್ಕೆ ಅದೇ ಶಾಲೆಯ ಮತ್ತೋರ್ವ ಶಿಕ್ಷಕಿ ನೀಡಿದ ದೂರಿನ ಅನ್ವಯ ದೂರು ದಾಖಲಾಗಿದೆ.
ಇನ್ನು ಘಟನೆ ನಡೆದು ಎರಡು ದಿನಗಳು ಕಳೆದರೂ ಸಹ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ದೂರು ದಾಖಲಿಸದೆ ನಿರ್ಲಕ್ಷ ತೋರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ ಕಾಳಜಿ ತಂಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ನ್ಯಾಯಾಧೀಶರಾದ ಶ್ರೀಮತಿ ನೂರುನ್ನಿಸ್ಸ ರವರ ಗಮನಕ್ಕೆ ತಂದ ಕೂಡಲೇ ನ್ಯಾಯಾಧೀಶರು ಕೂಡಲೇ ಪ್ರಕರಣ ದಾಖಲಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ ಬೆನ್ನೆಲೆ ಮಧುಗಿರಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಇನ್ನು ಘಟನೆಯಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಕಿ ಸುಶೀಲಾದೇವಿ ಹಾಗೂ ಆಕೆಯ ಪುತ್ರ ಅನೂಪ್ ಎಂಬತನ ಮೇಲೆ ಬಿ ಏನ್ ಎಸ್ ಕಾಯ್ದೆ 115(2),329(4),351(2),352,3(5)ಹಾಗೂ Juvinile justice act,2015 ಕಾಯ್ದೆ ಅನ್ವಯ ಎಫ್ ಐ ಆರ್ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
