ಕೊರಟಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಗರಣ ಸದ್ಯದಲ್ಲೇ ದೂರು ದಾಖಲು – ವಕೀಲರಾದ ಶಿವಕುಮಾರ್ ಹೇಳಿಕೆ

ತುಮಕೂರು -ತುಮಕೂರು ವಿಶ್ವವಿದ್ಯಾನಿಲಯ ವ್ಯಾಪ್ತಿಗೆ ಒಳಪಡುವ ಕೊರಟಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಗರಣವನ್ನ ಮುಚ್ಚಿ ಹಾಕಲು ತುಮಕೂರು ವಿಶ್ವವಿದ್ಯಾನಿಲಯದ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಚಿಂತನಾ ಸಮಾನ ಮನಸ್ಕ ವಕೀಲರ ತಂಡದ ಸದಸ್ಯರಾದ ಶಿವಕುಮಾರ್ ಮೇಷ್ಟ್ರು ತಿಳಿಸಿದ್ದಾರೆ.

ಪರೀಕ್ಷಾ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ನೀಡಲಾಗುವ ಗೌರವ ದನವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರುಗಳು ತನ್ನ ಕುಟುಂಬಸ್ಥರ ಹೆಸರಿಗೆ ಆಕ್ರಮವಾಗಿ ಹಣ ವರ್ಗಾವಣೆ ಮಾಡಿಕೊಳ್ಳುವ ಮೂಲಕ ಸರ್ಕಾರಿ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಗಂಭೀರ ಆರೋಪದ ಪ್ರಕರಣವಾಗಿದ್ದು ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರು ಒಳಗೊಂಡಂತೆ ಆಡಳಿತ ಮಂಡಳಿಗೆ ದೂರು ಸಲ್ಲಿಸಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಪ್ರತ್ಯೇಕ ಸಮಿತಿಯನ್ನ ರಚನೆ ಮಾಡಿ ತನಿಖೆ ಮಾಡಲಾಗಿದ್ದು ನಾವು ನೀಡಿರುವ ದೂರು ನೈಜ ದೂರಾಗಿದ್ದು ಕೊರಟಗೆರೆ ಕಾಲೇಜಿನಲ್ಲಿ ಹಣ ದುರುಪಯೋಗವಾಗಿದೆ ಎಂದು ಈಗಾಗಲೇ ಸಮಿತಿ ವರದಿಯನ್ನು ಸಲ್ಲಿಸಿದ್ದು ವರದಿ ಅನ್ವಯ ಈಗಾಗಲೇ ಆರೋಪ ಹೊತ್ತಿರುವ ಖಾಸಗಿ ವ್ಯಕ್ತಿಗಳು ದುರ್ಬಳಕೆ ಮಾಡಿಕೊಂಡಿರುವ ಹಣವನ್ನ ಈಗಾಗಲೇ ತುಮಕೂರು ವಿಶ್ವವಿದ್ಯಾನಿಲಯದ ಖಾತೆಗೆ ಜಮಾ ಮಾಡಿದ್ದು ಆದ್ದರಿಂದ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ ಎಂದು ಹಿಂಬರಹ ನೀಡಿದ್ದನ್ನ ನೋಡಿದರೆ ತುಮಕೂರು ವಿಶ್ವವಿದ್ಯಾನಿಲಯದ ಅಧಿಕಾರಿ ವರ್ಗ ಆರೋಪ ಹೊತ್ತವರ ರಕ್ಷಣೆಗೆ ನಿಂತಿರುವುದು ಸ್ಪಷ್ಟವಾಗಿ ತಿಳಿಯುತ್ತಿದೆ ಹಾಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ದಿನದಲ್ಲಿ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಪ್ರಕರಣದಲ್ಲಿ ಲಕ್ಷಾಂತರ ರೂಗಳ ಹಣವನ್ನ ದುರ್ಬಳಕೆ ಮಾಡಿಕೊಳ್ಳಲಾಗಿದ್ದು ಪ್ರಕರಣದ ಸಂಪೂರ್ಣ ತನಿಖೆ ಮಾಡಬೇಕಿರುವ ಕಾರಣ ಪೊಲೀಸ್ ದೂರನ್ನು ದಾಖಲಿಸಲಾಗುವುದು ಎಂದಿದ್ದಾರೆ.
ಅದೇನೇ ಇರಲಿ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಹೊಣೆ ಹೊತ್ತವರು ಸರ್ಕಾರಿ ಹಣವನ್ನು ಕುಟುಂಬಸ್ಥರ ಹೆಸರುಗಳಿಗೆ ಹಣ ವರ್ಗಾವಣೆ ಮಾಡಿಕೊಂಡು ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವವರ ಮೇಲೆ ಯಾವ ರೀತಿಯ ಕ್ರಮ ಆಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
