ನಿಯಮಬಾಹಿರವಾಗಿ ಸರ್ಕಾರಿ ಭೂಮಿ ವರ್ಗಾವಣೆ: ತುಮಕೂರು ಜಿಲ್ಲಾಧಿಕಾರಿಗಳಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯದಿಂದ ನೋಟೀಸ್ ಜಾರಿ……

ನಿಯಮಬಾಹಿರವಾಗಿ ಸರ್ಕಾರಿ ಭೂಮಿ ವರ್ಗಾವಣೆ: ತುಮಕೂರು ಜಿಲ್ಲಾಧಿಕಾರಿಗಳಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯದಿಂದ ನೋಟೀಸ್ ಜಾರಿ……

ತುಮಕೂರು -ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ತುಮ್ಮಲು ಗ್ರಾಮದ ಸರಕಾರಿ ಜಮೀನನ್ನು ನಿಯಮಬಾಹಿರವಾಗಿ ಭೂಪರಿವರ್ತನೆ ಮಾಡಿರುವ ಆರೋಪ ಹಾಗೂ ಜಿಲ್ಲಾಧಿಕಾರಿಗಳ ಡಿಜಿಟಲ್ ಸಹಿ ದುರುಪಯೋಗ ಸಂಬಂಧ ತುಮಕೂರಿನ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಕಂದಾಯ ಇಲಾಖೆ ಇತರೆ ಅಧಿಕಾರಿಗಳು ಮತ್ತು ಇಬ್ಬರು ಉಪನೊಂದಣಾಧಿಕಾರಿಗಳ ವಿರುದ್ದ ತುಮಕೂರಿನ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗೀ ದೂರು ದಾಖಲಾಗಿದ್ದು ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳಿಗೆ ಘನ ನ್ಯಾಯಾಲಯವು ನೋಟೀಸ್ ಜಾರಿ ಮಾಡಿದೆ.

 

 

 

 

 

ಸಾಮಾಜಿಕ ಹೋರಾಟಗಾರ ಹೆಚ್.ಜಿ.ರಮೇಶ್ ತುಮ್ಮಲು ಗ್ರಾಮದಲ್ಲಿ ಸರಕಾರಿ ಜಮೀನನ್ನು ನಿಯಮಬಾಹಿರವಾಗಿ ಭೂಪರಿವರ್ತನೆ ಮಾಡಿರುವ ಅಕ್ರಮ ಪ್ರಶ್ನಿಸಿ ನ್ಯಾಯಾಲಯಕ್ಕೆ ದಾಖಲೆ ಸಹಿತ ಖಾಸಗೀ ದೂರು ದಾಖಲಿಸಿದ್ದರು,ದಾಖಲೆಗಳನ್ನು ಪರಿಶೀಲಿಸಿದ ಘನ ನ್ಯಾಯಾಲಯವು ಭೂ ವರ್ಗಾವಣೆ ಅವಧಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಂದಾಯ ನಿರೀಕ್ಷಕರು,ತಹಶೀಲ್ದಾರ್,ಉಪವಿಭಾಗಾಧಿಕಾರಿಗಳು ಹಾಗೂ ಜಿಲ್ಲಾ ನೊಂದಣಾಧಿಕಾರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ,ತುಮಕೂರು ಜಿಲ್ಲಾಧಿಕಾರಿಗಳಿಗೆ ಹಾಗೂ ಇತರೆ ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿ 16-11-2026 ರಂದು ದಾಖಲೆ ಸಹಿತ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.

 

Leave a Reply

Your email address will not be published. Required fields are marked *